ಕರ್ನಾಟಕದ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವೆಡೆ ಇಂದು ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಅಫ್ಜಲ್ಪುರ್, ಲಿಂಗಸುಗೂರು, ಸಾಗರ, ಇಂಡಿ, ಬೆಳ್ಳೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 19.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.