ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಕ್ವಿಂಟಲ್ ಕೊಬ್ಬರಿ ಧಾರಣೆ 19 ಸಾವಿರ ರೂ. ಗಡಿ ದಾಟುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ.
2014-15ರಲ್ಲಿ 19 ಸಾವಿರ ಗರಿಷ್ಠ ಬೆಲೆ ಪಡೆದಿದ್ದು ಈವರೆಗಿನ ದಾಖಲೆಯಾಗಿತ್ತು. ಕ್ವಿಂಟಲ್ ಕೊಬ್ಬರಿ (Coconut) 19,051ಕ್ಕೆ ಮಾರಾಟವಾಗುವ ಮೂಲಕ ಈ ಹಿಂದಿನ ದಾಖಲೆ ಮುರಿದಿದೆ. ಎಪಿಎಂಸಿ 2,704 (6,296 ) ಆವಕವಾಗಿದ್ದು, ಕನಿಷ್ಠ 16,800 ರೂ.ಗೆ ಮಾರಾಟವಾಗಿದೆ.
ಕಳೆದ ಕೆಲ ದಿನಗಳಿಂದ ಕೊಬ್ಬರಿ ಧಾರಣೆ ದಿನದಿಂದ ದಿನಕ್ಕೆ ನಿಧಾನವಾಗಿ ಏರಿಕೆಯಾಗುತ್ತಿರುವುದು ತೆಂಗು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮಾರ್ಚ್ 13ರಂದು ನಡೆದ ಹರಾಜಿನಲ್ಲಿ 14 ಸಾವಿರಕ್ಕೆ ಹೆಚ್ಚಳವಾಗಿತ್ತು. ಮಾರ್ಚ್ 20ರಂದು 17 ಸಾವಿರಕ್ಕೆ ಏರಿಕೆಯಾಗಿತ್ತು. ಕೇವಲ ಹತ್ತು ದಿನದ ಅಂತರದಲ್ಲಿ ಕ್ವಿಂಟಲ್‌ಗೆ 5 ಸಾವಿರ ಜಿಗಿತ ಕಂಡಿದೆ.