ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಮೂಲಗಳ ಪ್ರಕಾರ ಗೀತಾ ಶಿವಕುಮಾರ್ ಅವರಿಗೆ ಸರ್ಜರಿಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಅವರ ಸಹೋದರ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಇದ್ದಕ್ಕಿದ್ದಂತೆ ಏನಾಯ್ತು, ಏನಿದು ಸರ್ಜರಿ? ಎಂಬುದು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.