ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಾಳ ಬಳಿ ಭೀಮಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರಜ್ವಲ್ ಹರವಾಳ (16) ಮೃತ ಯುವಕ. ಎರಡು ದಿನಗಳ ರಜೆಯ ಕಾರಣ ಪ್ರಜ್ವಲ್ ಸ್ವಗ್ರಾಮಕ್ಕೆ ಬಂದಿದ್ದ. ಈ ವೇಳೆ ಸ್ನೇಹಿತರೊಂದಿಗೆ ಸೇರಿ ಭೀಮಾ ನದಿಗೆ ಈಜಲು ತೆರಳಿದ್ದ. ನೀರಿನ ಆಳ ಲೆಕ್ಕಿಸದೇ ನದಿಗೆ ಇಳಿದ ಪರಿಣಾಮ ನೀರು ಪಾಲಾಗಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ತೀವ್ರ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.