Thursday, January 29, 2026
Thursday, January 29, 2026
spot_img

ಸರ್ಕಾರಿ ನೌಕರರಿಗೆ ಹೊಸ ರೂಲ್ಸ್‌, ಈ ರೀತಿ ಬಟ್ಟೆ ಹಾಕೋದು ಕಡ್ಡಾಯವಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಸರ್ಕಾರಿ ನೌಕರರಿಗೆ ಹೊಸ ರೂಲ್ಸ್‌ ಒಂದನ್ನು ತರಲಾಗಿದೆ. ಖಾದಿ ಬಟ್ಟೆಗಳು ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ.

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಬಗ್ಗೆ ಚರ್ಚೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !