ಹೊಸದಿಗಂತ ಡಿಜಿಟಲ್ ಡೆಸ್ಕ್:
‘ದೇವರ’ ಸಿನಿಮಾದ ಬಳಿಕ ಇದೀಗ ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿರುವ ಜೂ ಎನ್ಟಿಆರ್, KGF ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಕೈಜೋಡಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಈಗಾಗಲೇ ಶುರುವಾಗಿದ್ದು, ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಿಸಲಾಗಿದೆ.
ಹೌದು, ಜೂ ಎನ್ಟಿಆರ್ ಹಾಗೂ ಪ್ರಶಾಂತ್ ನೀಲ್ ಅವರ ಸಿನಮಾ ಮುಂದಿನ ವರ್ಷ ಬಿಡುಗಡೆ ಆಗಲಿದೆ. 2026ರ ಜನವರಿ 9 ರಂದು ಸಿನಿಮಾ ತೆರೆಗೆ ಬರಲಿದೆ.
ಈ ಸಿನಿಮಾದಲ್ಲಿ ಎರಡು ಷೇಡ್ಗಳಲ್ಲಿ ಜೂ ಎನ್ಟಿಆರ್ ಕಾಣಿಸಿಕೊಳ್ಳಲಿದ್ದಾರೆ. ಜೂ ಎನ್ಟಿಆರ್ ಗೆ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಲಿದ್ದಾರೆ
ಇನ್ನು ವಿಶೇಷವೆಂದರೆ ಇದೇ ಸಮಯಕ್ಕೆ ಸರಿಯಾಗಿ ದಳಪತಿ ವಿಜಯ್ ನಟನೆಯ ಕಟ್ಟ ಕಡೆಯ ಸಿನಿಮಾ ‘ಜನನಾಯಗನ್’ ಕೂಡ ಬಿಡುಗಡೆ ಆಗಲಿದೆ. ಹಾಗಾಗಿ ಇಬ್ಬರು ದಿಗ್ಗಜರ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಪರಸ್ಪರ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.