ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಹಿ ತಿಂಡಿ, ಇಡ್ಲಿ ಬಳಿಕ ಇದೀಗ ಆಹಾರ ಸುರಕ್ಷತಾ ಇಲಾಖೆ ಮತ್ತೆ ಶಾಕ್ ನ್ಯೂಸ್ ನೀಡಿದ್ದು, ಪನ್ನೀರ್‌ನಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆಯಾಗಿದೆ ಎಂಬುದು ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ತಿಳಿದು ಬಂದಿದೆ.
ಇತ್ತೀಚೆಗೆ ಕಳಪೆ ಆಹಾರ ಪದಾರ್ಥಗಳ ವಿರುದ್ಧ ಸಮರ ಸಾರಿತ್ತು. ರಾಸಾಯನಿಕಗಳ ಬಳಕೆಗಳ ವಿರುದ್ಧ ಚಾಟಿ ಬೀಸಿರುವ ಆಹಾರ ಇಲಾಖೆ ಪನ್ನೀರ್ ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್ಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಪನ್ನೀರ್‌ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವುದು ದೃಢವಾಗಿದೆ.