ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಗಂತ ವರದಿ,ಮುಂಡಗೋಡ:

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಪಟ್ಟಣದ ಬಸವ ಬೀದಿ ನಡೆದಿದೆ.

ಅರ್ಹನ್ ಬಾಹುಬಲಿ ಚಿವಟೆ(೧೬) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ.

ಈತ ಮುಂಡಗೋಡಿನ ಖಾಸಗಿ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ್ ಮಾಡುತ್ತಿದ್ದ. ಕಳೆದ ವಾರವಷ್ಟೇ ಸಿಬಿಎಸ್ಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ. ಪರೀಕ್ಷೆಯಲ್ಲಿ ಉತ್ತೀರ್ಣ ಆಗಲ್ಲವೇನೋ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಬುಧವಾರ ಬೆಳಗಿನ ಜಾವ ೮ ಗಂಟೆಯ ವೇಳೆ, ಮನೆಯ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಪಾಲಕರು ನೋಡಿ, ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯುದಿದ್ದಾರೆ. ಅಷ್ಟೊತ್ತಿಗಾಗಲೇ ವಿದ್ಯಾರ್ಥಿಯ ಪ್ರಾಣಪಕ್ಷಿ ಹಾರಿಹೋಗಿತ್ತು.

ಈ ಕುರಿತು ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ: ಬಾಹುಬಲಿ ದಂಪತಿಗೆ ಇಬ್ಬರ ಮಕ್ಕಳು. ಅರ್ಹನ್ ನೇ ಹಿರಿಯ ಪುತ್ರ, ಹದಿಹರೆಯದ ಮಗ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪಾಲಕರು ಸಂಕಟ ಹೇಳತಿರಲಾಗಿದೆ.

ಅರ್ಹನ್ ಆತ್ಮಹತ್ಯೆ ಮಾಡಿಕೊಂಡ ವಿಷಯ ಮೃತನ ಸ್ನೇಹಿತರಿಗೆ ಸಿಡಲು ಬಡದಂತಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here