Thursday, January 29, 2026
Thursday, January 29, 2026
spot_img

ರಾಜ್ಯದ ಪೊಲೀಸರು ಫುಲ್‌ ಖುಷ್‌! ಬರ್ಥ್‌ಡೇ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾರ್ವಜನಿಕರ ಸುರಕ್ಷತೆಗಾಗಿ ಕಾರ್ಯನಿರ್ವಹಿಸುವ ಪೊಲೀಸರಿಗೆ ತಮ್ಮ ಜನ್ಮದಿನ ನೆನಪೇ ಇರೋದಿಲ್ಲ. ನಿಸ್ವಾರ್ಥ ಸೇವೆ ಸಲ್ಲಿಸುವ ಪೊಲೀಸರಿಗೆ ಸರ್ಕಾರ ಖುಷಿ ಸುದ್ದಿ ನೀಡಿದೆ.

ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಆದೇಶ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂತಹ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳುತ್ತಾರೆ.‌

ಜೊತೆಗೆ ಕುಟುಂಬದೊಂದಿಗೆ ಗುಣಮಟ್ಟದ ಸಮಯ ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳಲು ಸಹಾಯಕವಾಗುತ್ತದೆ. ಒತ್ತಡ ಕಡಿಮೆಯಾಗಿ, ಮನೋಬಲ ಹೆಚ್ಚಾಗುತ್ತದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !