Friday, September 12, 2025

ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆನ್ನಿಗೇ ಬಂಧನ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಸಮೀರ್ ಗೆ ಮಂಗಳೂರಿನ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸಮೀರ್ ಬಂಧನಕ್ಕಾಗಿ ಇಂದು ಬೆಳಗ್ಗಿನಿಂದಲೇ ಧರ್ಮಸ್ಥಳ ಪೊಲೀಸರು ಬೆಂಗಳೂರಿನಲ್ಲಿರುವ ತನ ಮನೆಯನ್ನು ಸುತ್ತುವರಿದಿದ್ದು, ಬಂಧನ ಭೀತಿ ಹಿನ್ನೆಲೆಯಲ್ಲಿ ಆತ ಮಂಗಳೂರಿನ ಜಿಲ್ಲಾ ನ್ಯಾಯಾಲಯಕ್ಕೆ ಸಮೀರ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಸಂಜೆ 4.30ರ ಸಮಾರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜು.12ರಂದು ಪೊಲೀಸರು ದಾಖಲಿಸಿದ್ದ ಸುಮೋಟೋ ಕೇಸ್ ಸಂಬಂಧ ಸಮಿರ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಇದನ್ನೂ ಓದಿ