ಎಲ್ಲಾ ಬೆಲೆ ಏರಿಕೆ ಶಾಕ್ ಆಯ್ತು.. ಈಗ ಕರೆಂಟ್ ಶಾಕ್ ಸರದಿ: ಯೂನಿಟ್ ​​ಗೆ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದೀಗ ವಿದ್ಯುತ್‌ ದರ ಹೆಚ್ಚಳದ ಬರೆ ಬಿದ್ದಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ ಇಂದು ಆದೇಶ ಹೊರಡಿಸಿದೆ.

ಈ ಮೂಲಕ ಜನರಿಗೆ ವಿದ್ಯುತ್​ ಶಾಕ್​ ಕೊಟ್ಟಿದೆ. ಹಾಗಾದ್ರೆ, ಪ್ರತಿ ಯೂನಿಟ್​​ ವಿದ್ಯುತ್​​ಗೆ ಎಷ್ಟು ಹೆಚ್ಚಳ ಮಾಡಲಾಗಿದೆ ಗೋತ್ತಾ?

ಇಂದು ನಡೆದ ಸಚಿವ ಸಂಪುಟದಲ್ಲಿ ನಂದಿನಿ ಹಾಲು ಹಾಗೂ ಮೊಸರು ದರ ಏರಿಕೆಗೆ ಗ್ರೀನ್ ಸಿಗ್ನಲ್​ ಸಿಕ್ಕಿದೆ. ಇದರ ಬೆನ್ನಲ್ಲೇ ವಿದ್ಯುತ್ ದರ ಕೂಡ ಹೆಚ್ಚು ಮಾಡಲಾಗಿದೆ. ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿದ್ದು, ಪರಿಷ್ಕೃತ ವಿದ್ಯುತ್ ದರ ಏಪ್ರಿಲ್‌ 1ರಿಂದಲೇ ಅನ್ವಯವಾಗಲಿದೆ ಎನ್ನಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!