ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ತರುವಲ್ಲಿ ‘ಕೈ’ ಎಡವಿದೆ: ಸಂಸದ ಈರಣ್ಣ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ತರುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನಿರ್ದೇಶನ ನೀಡಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ.

ಬೆಳಗಾವಿ, ಮೈಸೂರು ಮತ್ತು ಕಲಬುರಗಿಯಲ್ಲಿ 6 ತಿಂಗಳೊಳಗೆ ಎನ್‌ಐಎ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಆದರೂ, ರಾಜ್ಯ ಸರ್ಕಾರ ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಳೆದ 8-9 ವರ್ಷಗಳ ಹಳೆಯ ಪ್ರಕರಣಗಳು ಬಾಕಿ ಇರುವುದರಿಂದ ಹೊಸ ನ್ಯಾಯಾಲಯಗಳ ಸ್ಥಾಪಿಸಲು ರಾಜ್ಯ ಹೈಕೋರ್ಟ್ ಸೂಚನೆ ನೀಡಿದೆ. ಆದರೆ, ರಾಜ್ಯ ಸರ್ಕಾರ ಜಾರಿಗೆ ತರುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!