ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ಕೊಡಲು ಸಂವಿಧಾನ ಬದಲಾವಣೆ ಮಾಡ್ತೀವಿ ಎಂಬ ಡಿಕೆಶಿ ಹೇಳಿಕೆ ಖಂಡಿಸಿ, ಡಿಕೆಶಿ ರಾಜೀನಾಮೆ ಕೊಡುವವರೆಗೂ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಎಸ್ಸಿ ಘಟಕದ ಅಧ್ಯಕ್ಷ ಮಾಜಿ ಶಾಸಕ ಅನ್ನದಾನಿ ಆಕ್ರೋಶ ಹೊರಹಾಕಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ್ದು, ಡಿಕೆಶಿ ಪೋಸ್ಟರ್ ಹಿಡಿದು, ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಈ ವೇಳೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದ್ದಾರೆ. ನೀವು ಯಾರಿಗಾದರೂ ಮೀಸಲಾತಿ ಕೊಡಿ ನಮ್ಮ ಅಭ್ಯಂತರ ಇಲ್ಲ. ಆದರೆ ಸಂವಿಧಾನ ಬದಲಾವಣೆ ಮಾಡುವ ಮಾತು ಆಡಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ.