ಮಚ್ಚು ಹಿಡಿದು ರೀಲ್ಸ್: ವಿನಯ್​ ಗೌಡ, ರಜತ್​ಗೆ ಷರತ್ತು ಬದ್ಧ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿದ್ದ ಬಿಗ್​ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ಅವರುಗಳು ಜಾಮೀನು ಮಂಜೂರಾಗಿದೆ.

ವಿನಯ್ ಹಾಗೂ ರಜತ್ ಅವರು ಕೆಲ ದಿನಗಳ ಹಿಂದೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ವಿಡಿಯೋನಲ್ಲಿ ವಿನಯ್ ಮತ್ತು ರಜತ್ ಇಬ್ಬರೂ ಸಹ ಮಚ್ಚೊಂದನ್ನು ಹಿಡಿದುಕೊಂಡಿದ್ದರು. ಇದೇ ಕಾರಣಕ್ಕೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಸಾಕ್ಷ್ಯ ನಾಶ ಪ್ರಕರಣದಡಿ ಇಬ್ಬರನ್ನೂ ಬಂಧಿಸಲಾಗಿತ್ತು. ಇದೀಗ ಇಬ್ಬರಿಗೂ ಸಹ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

24ನೇ ಎಸಿಜೆಎಂ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಿದೆ. ಇಬ್ಬರಿಗೂ ಸಹ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, 10 ಸಾವಿರ ರೂಪಾಯಿ ಶೂರಿಟಿ ನೀಡುವ ಷರತ್ತನ್ನು ನ್ಯಾಯಾಲಯ ವಿಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!