ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನದಂದು ಅಂದರೆ ಏ.14 ರಂದು ಭಾರತದಾದ್ಯಂತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಈ ಘೋಷಣೆ ಮಾಡಿದ್ದು, ‘ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದ ಸಂವಿಧಾನ ಶಿಲ್ಪಿ, ನಮ್ಮ ಬಾಬಾ ಸಾಹೇಬ್ ಪೂಜ್ಯ ಡಾ. ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಸಾರ್ವಜನಿಕ ರಜೆ ಇರುತ್ತದೆ. ಬಾಬಾ ಸಾಹೇಬರ ಕಟ್ಟಾ ಅನುಯಾಯಿ, ಗೌರವಾನ್ವಿತ ಪ್ರಧಾನಿ ಜಿ ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ’ ಎಂದು ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಏಪ್ರಿಲ್ 14 ರ ಸೋಮವಾರದಂದು ಮುಚ್ಚಲಿವೆ. ಈ ನಿರ್ಧಾರದ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲು ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಲಾಗಿದೆ.