IPL | ಚೆನ್ನೈ ಕೋಟೆಗೆ ‘ರಾಯಲ್‌’ ಎಂಟ್ರಿ ; ಸೋಶಿಯಲ್‌ ಮೀಡಿಯಾ ತುಂಬಾ ಆರ್‌ಸಿಬಿ ಜಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : 

ಐಪಿಎಲ್‌ನ ಹೈವೋಲ್ಟೇಜ್‌ ಪಂದ್ಯದಲ್ಲಿ ಕೊನೆಗೂ 17 ವರ್ಷಗಳ ಬಳಿಕ ಚೆನ್ನೈ ನೆಲದಲ್ಲಿ ಆರ್‌ಸಿಬಿ ಗೆದ್ದು ಬೀಗಿದೆ.

ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ನಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿತು. 197 ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಚೆನ್ನೈ 20 ಓವರ್‌ಗೆ 8 ವಿಕೆಟ್‌ ನಷ್ಟಕ್ಕೆ 146 ರನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು.

ಚೆಪಾಕ್‌ನಲ್ಲಿ ಉಭಯ ತಂಡಗಳು ಒಟ್ಟು 10 ಪಂದ್ಯಗಳನ್ನಾಡಿವೆ. ಅದರಲ್ಲಿ ಚೆನ್ನೈ 8 ಹಾಗೂ ಆರ್‌ಸಿಬಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಬರೋಬ್ಬರಿ 17 ವರ್ಷಗಳ ಬಳಿಕ ಚೆನ್ನೈ ನೆಲದಲ್ಲಿ ಆರ್‌ಸಿಬಿ ಗೆದ್ದು ಸಂಭ್ರಮಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಜಪ ನಡೆಯುತ್ತಿದ್ದು, ಜನ ಸ್ಟೇಟಸ್‌ ಹಾಗೂ ಸ್ಟೋರಿಗಳಲ್ಲಿ ಆರ್‌ಸಿಬಿಗೆ ಶುಭಾಷಯ ಹೇಳಿದ್ದಾರೆ.

ಆರ್‌ಸಿಬಿ ಬ್ಯಾಟಿಂಗ್‌ನಲ್ಲಿ ಉತ್ತಮ ಆರಂಭ ಪಡೆದುಕೊಂಡಿತ್ತು. ಪಿಲ್‌ ಸಾಲ್ಟ್‌ ಆರಂಭದಲ್ಲೇ ಸಿಕ್ಸರ್‌, ಬೌಂಡರಿಗಳೊಂದಿಗೆ ಅಬ್ಬರಿಸಿದರು. 16 ಬಾಲ್‌ಗೆ 5 ಫೋರ್‌, 1 ಸಿಕ್ಸರ್‌ನೊಂದಿಗೆ 32 ರನ್‌ ಗಳಿಸಿದರು. ಆದರೆ, ಧೋನಿ ಮಾಡಿದ ಮ್ಯಾಜಿಕ್‌ ಸ್ಟಂಪ್‌ಗೆ ಔಟಾಗಿ ನಿರ್ಗಮಿಸಿದ್ದು, ಆರ್‌ಸಿಬಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತು. ಈ ವೇಳೆ ವಿರಾಟ್‌ ಕೊಹ್ಲಿಗೆ ದೇವದತ್‌ ಪಡಿಕ್ಕಲ್ ಜೊತೆಯಾದರು. 2 ಸಿಕ್ಸರ್‌, 2 ಫೋರ್‌ ಬಾರಿಸಿ ಭರವಸೆ ಮೂಡಿಸಿದ್ದ ಪಡಿಕ್ಕಲ್‌‌ 27 ರನ್‌ ಗಳಿಸಿ ಔಟಾದರು. ಆಗ ಕೊಹ್ಲಿಗೆ ಕ್ಯಾಪ್ಟನ್‌ ರಜತ್‌ ಪಾಟೀದಾರ್‌ ಜೊತೆಯಾದರು. ನಿಧಾನಗತಿ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಕೊಹ್ಲಿ 30 ಬಾಲ್‌ಗೆ 31 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿ ಹೊರನಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!