ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಯನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ನಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಶನಿವಾರದ ಹೊತ್ತಿಗೆ ಸಾವಿನ ಸಂಖ್ಯೆ 1,000ಕ್ಕೆ ಏರಿಕೆಯಾಗಿದ್ದು, 2,376 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಗಳು ವರದಿ ಮಾಡಿವೆ.
ಮ್ಯಾನ್ಮಾರ್ನಲ್ಲಿ ಶುಕ್ರವಾರ 11:50ರ ಹೊತ್ತಿಗೆ ಮೊದಲ ಬಾರಿಗೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಇದಾದಗ 15 ನಿಮಿಷಗಳಲ್ಲೇ ಮತ್ತೊಮ್ಮೆ 6.4 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅಲ್ಲದೇ ಶುಕ್ರವಾರ ರಾತ್ರಿ 11:56ರ ವೇಳೆ ಮ್ಯಾನ್ಮಾರ್ನಲ್ಲಿ 6ನೇ ಬಾರಿಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿತ್ತು.
ಹೀಗಾಗಿ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಎರಡೂ ಕಡೆ ಸೇರಿ ಒಟ್ಟು ಸಾವಿನ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ. ಅಲ್ಲದೇ ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.