ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಇಂದು ನಾಗ್ಪುರದ ರೇಶಿಂಬಾಗ್‌ನಲ್ಲಿರುವ ಸ್ಮೃತಿ ಮಂದಿರದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಅವರ ಜೊತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಅವರಿಗೆ ಗೌರವ ಸಲ್ಲಿಸಿದರು.
ಪ್ರಧಾನಿ ಮೋದಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ನಾಗ್ಪುರಕ್ಕೆ ಆಗಮಿಸಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಮಹಾರಾಷ್ಟ್ರ ಸಂಪುಟದ ಇತರ ಸಚಿವರು ನಾಗ್ಪುರ ವಿಮಾನ ನಿಲ್ದಾಣದಲ್ಲಿ ಅವರನ್ನು ಬರಮಾಡಿಕೊಂಡರು.