ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವಿರೇಂದ್ರ ಪಪ್ಪಿಗೆ ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಮೂಲಕ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಖುಷಿಯಲ್ಲಿದ್ದ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್ ಕೊಟ್ಟಿದೆ.
ಈ ಹಿಂದೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ಇದೀಗ ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರೆ ಒಟ್ಟು 177.3 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದೆ.
ಆನ್ಲೈನ್ ಬೆಟ್ಟಿಂಗ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ವಿರೇಂದ್ರ ಪಪ್ಪಿ ಮನೆಗಳ ಮೇಲೆ ದಾಳಿ ಮಾಡಿತ್ತು. ಆಗ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ ನೂರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿತ್ತು. ಇದೀಗ ಮತ್ತೆ ಸಿ ಅಕ್ರಮ ಹಣದಿಂದ ಸಂಪಾದನೆ ಮಾಡಿದ ಕೃಷಿ ಜಮೀನು, ನಿವೇಶನ ಸೇರಿ 177.3 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.



