ಪ್ರಯಾಣಿಕರಿಗೆ ಗುಡ್ ನ್ಯೂಸ್ : ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇಸಿಗೆ ಅವಧಿಯಲ್ಲಿ ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮುಂಬೈ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಬೇಡಿಕೆಯ ಮೇರೆಗೆ 13 ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ.

ಈ ರೈಲು ಎರಡೂ ದಿಕ್ಕುಗಳಲ್ಲಿ ದಾದರ, ಥಾಣೆ, ಕಲ್ಯಾಣ್, ಲೋನಾವಾಲ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮಿರಜ್, ಕುಡಚಿ, ರಾಯಬಾಗ್, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬಿರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ರೈಲಿನಲ್ಲಿ 22 ಬೋಗಿಗಳಿದ್ದು, ಅವುಗಳಲ್ಲಿ 1-ಎಸಿ ಟು ಟೈರ್, 5-ಎಸಿ ತ್ರಿ ಟೈರ್, 10-ಸ್ಲೀಪರ್ ಕ್ಲಾಸ್, 4-ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2-ಎಸ್‌ಎಲ್‌ಆರ್‌ಡಿ ಬೋಗಿಗಳು ಸೇರಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!