ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಏಪ್ರಿಲ್ 3ರಿಂದ ಮಳೆ ಶುರುವಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ,ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಬಹುದು. ಧಾರವಾಡ, ಕೊಪ್ಪದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 15.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಏಪ್ರಿಲ್ 1ರಂದು ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 3ರಂದು ಗುಡುಗು ಸಹಿತ ಮಳೆಯಾಗಲಿದೆ. ಏಪ್ರಿಲ್ 4ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.