ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಐಪಿಎಲ್ 2025 () ರ 12 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (MI vs KKR) ನಡುವೆ ನಡೆಯುತ್ತಿದೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಆದರೆ ಟಾಸ್ ಗೆದ್ದ ಬಳಿಕ ತಂಡಗಳ ಪ್ಲೇಯಿಂಗ್ 11 ಪ್ರಕಟಿಸುವ ವೇಳೆ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದೆ. ಮುಂಬೈ ತಂಡವನ್ನು ಐದು ಬಾರಿ ಚಾಂಪಿಯನ್ ಮಾಡಿದ್ದ ಮಾಜಿ ನಾಯಕ ರೋಹಿತ್ ಶರ್ಮಾರನ್ನೇ ಆಡುವ ಹನ್ನೊಂದರ ಬಳಗದಿಂದ ಕೈಬಿಡಲಾಗಿದೆ.
ಮುಂಬೈ ಇಂಡಿಯನ್ಸ್ ರೋಹಿತ್ ರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಟ್ಟಿರಬಹುದು. ಆದರೆ ಅವರು ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ಗೆ ಖಚಿತವಾಗಿ ಬರಲಿದ್ದಾರೆ. ವಾಸ್ತವವಾಗಿ, ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡುತ್ತಿರುವ ಕಾರಣ ರೋಹಿತ್ ಶರ್ಮಾ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಿದೆ.