ಶಿವಕುಮಾರ ಸ್ವಾಮೀಜಿ ಜಯಂತಿ: ಕನ್ನಡದಲ್ಲೇ ಟ್ವೀಟ್‌ ಮಾಡಿ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಮೋದಿ, ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ಶಿವಕುಮಾರ ಸ್ವಾಮೀಜಿಗಳು ತೋರಿಸಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಪ್ರಯತ್ನಗಳು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ ಎಂದು ಹೇಳಿದ್ದಾರೆ.

ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ಹೃತ್ಪೂರ್ವಕ ನಮನಗಳು. ಕಾರುಣ್ಯ ಮತ್ತು ದಣಿವರಿಯದ ಸೇವೆಯ ದಾರಿದೀಪವೆಂದು ಅವರನ್ನು ಸ್ಮರಿಸಲಾಗುತ್ತದೆ. ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ಅವರು ತೋರಿಸಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಪ್ರಯತ್ನಗಳು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ ಎಂದು ತಿಳಿಸಿದ್ದಾರೆ.

ಶ್ರೀಗಳ 118ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಶಿವಕುಮಾರ ಸ್ವಾಮೀಜಿಗಳ ಜಯಂತಿ ಪ್ರಯುಕ್ತ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಮಂಗಳವಾರ ಬೆಳಗ್ಗೆ ನೆರವೇರಿದ್ದು, ವಿವಿಧ ಮಠಾಧೀಶರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!