ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮ 13 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ದೀಸಾ ಪಟ್ಟಣದ ಬಳಿ ನಡೆದಿದೆ.
ಘಟನೆಯಲ್ಲಿ ಸುಮಾರು 13 ಮಂದಿ ಸಾವನ್ನಪ್ಪಿದ್ದಾರೆ. ದೀಸಾ ಪುರಸಭೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅವಶೇಷಗಳಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.