ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಕಣ್ಣಿಗೆ ಶಸ್ತ್ರಚಿಕಿತ್ಸೆಗೆ ಮಾಡಲಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ವೇಳೆ, ನಾನು ಇನ್ನೂ ಗಟ್ಟಿಯಾಗಿದ್ದೇನೆ ಎಂದು ಪಾಪರಾಜಿಗಳ ಕ್ಯಾಮೆರಾಗೆ ಹೇಳಿ ನಟ ಆಸ್ಪತ್ರೆಯಿಂದ ತೆರಳಿದ್ದಾರೆ. ಧರ್ಮೇಂದ್ರ ಕಣ್ಣಿಗೆ ಬ್ಯಾಂಡೇಜ್ ಹಾಕಿರೋದನ್ನು ನೋಡಿ ಫ್ಯಾನ್ಸ್ ಆತಂಕಗೊಂಡಿದ್ದಾರೆ.
ಧರ್ಮೇಂದ್ರ ಅವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಗೆ ಮಾಡಲಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಪತ್ರೆಯಿಂದ ನಿರ್ಗಮಿಸುವಾಗ ಧರ್ಮೇಂದ್ರ ಮಾತನಾಡಿ, ನನಗಿನ್ನೂ ಶಕ್ತಿಯಿದೆ, ನನಗೆ ಇನ್ನೂ ಜೀವನವಿದೆ. ಕಣ್ಣಿನ ಚಿಕಿತ್ಸೆ ಪಡೆದು ಬಂದಿದ್ದೇನೆ. ಲವ್ ಯೂ ಮೈ ಆಡಿಯನ್ಸ್, ಲವ್ ಯೂ ಫ್ಯಾನ್ಸ್, ನಾನು ಸ್ಟ್ರಾಂಗ್ ಆಗಿದ್ದೇನೆ ಎಂದಿದ್ದಾರೆ.