ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಗೃಹಿಣಿ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ವಿಚಾರಣಾ ನ್ಯಾಯಾಲಯ ವಿಧಿಸಿದ 10 ವರ್ಷಗಳ ಶಿಕ್ಷೆಗೆ ತಡೆ ನೀಡುವಂತೆ ವಿಸ್ಮಯ ಪತಿ ಕಿರಣ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾನೆ.
ಇದೀಗ ಕಿರಣ್ ಕುಮಾರ್ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ರಾಜೇಶ್ ಬಿಂದಾಲ್ ಅವರ ಪೀಠವು, ಕೇರಳ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ವಿಸ್ಮಯ ಆತ್ಮಹತ್ಯೆಗೆ ತನ್ನನ್ನು ನೇರವಾಗಿ ತಳುಕು ಹಾಕಲು ಯಾವುದೇ ಸಾಕ್ಷ್ಯಗಳಿಲ್ಲ ಎಂದು ಕಿರಣ್ ಪರ ವಕೀಲ ದೀಪಕ್ ಪ್ರಕಾಶ್ ವಾದ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಕೇರಳ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಲಾಗಿದೆ.
2021 ಜೂನ್ನಲ್ಲಿ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ವಿಸ್ಮಯ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು. ಗಂಡನ ಕಿರುಕುಳದಿಂದಲೇ ವಿಸ್ಮಯ ಸಾವಿಗೆ ಶರಣಾಗಿದ್ದಾಳೆ ಎಂದು ಆರಂಭದಿಂದಲೂ ಆಕೆಯ ಸಂಬಂಧಿಕರು ಆರೋಪಿಸಿದ್ದರು. ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.