ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಸಿದ್ದರಾಮಯ್ಯ 40 ಪರ್ಸೆಂಟ್ ಆರೋಪದ ತನಿಖೆಗೆ ನ್ಯಾ. ನಾಗಮೋಹನ್ ದಾಸ್ ಸಮಿತಿ ನೇಮಿಸಿದ್ದರು. ಇದೀಗ ತನಿಖಾ ಆಯೋಗ ಸರ್ಕಾರಕ್ಕೆ ವರದಿ ನೀಡಿದ್ದು, ಅದರಲ್ಲಿ ಬಿಜೆಪಿ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ್ದಾರೆ ಎನ್ನಲಾಗಿದೆ.
ಅಂದಿನ ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪ ಸಾಬೀತು ಪಡಿಸಲು ಬಲವಾದ ಸಾಕ್ಷ್ಯ ಇಲ್ಲ. ಗುತ್ತಿಗೆದಾರರ ಆರೋಪಗಳಿಗೆ ಯಾವುದೇ ಪುರಾವೆ, ದಾಖಲೆಗಳಿಲ್ಲ, ಗುತ್ತಿಗೆದಾರರು ಕೊಟ್ಟ ದಾಖಲೆ 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಪೂರಕವಾಗಿ ಯಾವುದೇ ಸಾಕ್ಷ್ಯಗಳಿಲ್ಲಎಂದು ವರದಿಯಲ್ಲಿ ಹೇಳಲಾಗಿದೆ ಎನ್ನಲಾಗಿದೆ