ಎಷ್ಟು ಹೇಳಿದ್ರೂ ಅರ್ಥನೇ ಆಗೋದಿಲ್ವಾ? ಮಕ್ಕಳ ಕೈಲಿ ಟಾಯ್ಲೆಟ್‌ ತಿಕ್ಕಿಸಿ ಸಸ್ಪೆಂಡ್‌ ಆದ ಶಿಕ್ಷಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಲು ಆರೋಪದ ಮೇಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯಲ್ಲಿ ಜನವರಿಯಲ್ಲಿ ಘಟನೆ ನಡೆದಿತ್ತು. ವಿದ್ಯಾರ್ಥಿಗಳು ಶಾಲೆಯ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಸಾಮಾಜಿಕ ಕಾರ್ಯಕರ್ತ ನಾಗೇಶ್ ಅವರು ನೀಡಿದ ದೂರಿನ ಆಧಾರದ ಮೇಲೆ, ಮಾರ್ಚ್ 29 ರಂದು ಶಾಲಾ ಮುಖ್ಯೋಪಾಧ್ಯಾಯಿನಿ ಸಾಕಮ್ಮ ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ಸುಮಿತ್ರಮ್ಮ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾದೇಶಿಕ ಸುದ್ದಿ ವಾಹಿನಿಯಲ್ಲಿ ಸುದ್ದಿ ಪ್ರಸಾರವಾಗಿತ್ತು. ಬಳಿಕ ಘಟನೆಯ ಬಗ್ಗೆ ನಾಗೇಶ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ಫೆಬ್ರವರಿ ಅಂತ್ಯದಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಮತ್ತು ಶಿಕ್ಷಣ ಇಲಾಖೆ ಆಂತರಿಕ ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!