February 3, 2026
Tuesday, February 3, 2026
spot_img

GOLD RATE | ಸ್ವಲ್ಪ ರಿಲ್ಯಾಕ್ಸ್‌ ಆದ ಬಂಗಾರ ಖರೀದಿದಾರರು, ಚಿನ್ನದ ಬೆಲೆ ಕೊಂಚ ಇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಕ್ಕಾಪಟ್ಟೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಇಳಿಕೆ ಕಂಡಿವೆ.

ಆಭರಣ ಚಿನ್ನದ ಬೆಲೆ ಮತ್ತೆ 16,000 ರೂಗಿಂತ ಕಡಿಮೆಗೆ ಬಂದಿದೆ. ವಿದೇಶ ಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ 10-15 ರೂಗಳಷ್ಟು ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇದರ ಬೆಲೆ 400 ರು ಗಡಿಯೊಳಗೆ ಬಂದಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,56,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,70,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 39,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,56,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 39,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 41,500 ರೂ ಇದೆ.

ಬೆಂಗಳೂರಿನಲ್ಲಿ 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 17,062 ರೂ, 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,640 ರೂ ಹಾಗೂ ಬೆಳ್ಳಿ ಬೆಲೆ 1 ಗ್ರಾಂಗೆ: 410 ರೂ. ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !