ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಭಾರತದ ರಫ್ತುಗಳ ಮೇಲಿನ ಅಮೆರಿಕದ ಸುಂಕ ಹೇರಿಕೆಯಿಂದ ದೇಶದ ಆರ್ಥಿಕತೆ ನಾಶವಾಗುತ್ತದೆ ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಚೀನಾ ಭಾರತದ 4,000 ಚದರ ಕಿಲೋಮೀಟರ್ ಪ್ರದೇಶವನ್ನು ವಶಪಡಿಸಿಕೊಂಡಿದೆ ಮತ್ತು ಅಮೆರಿಕ ವಿಧಿಸುವ ಆಮದು ಸುಂಕಗಳು ಭಾರತದ ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ ಎಂದು ಟೀಕಿಸಿದರು. .
ನಮ್ಮ ಭೂಪ್ರದೇಶದ 4,000 ಚದರ ಕಿಲೋಮೀಟರ್‌ನಲ್ಲಿ ಚೀನಾ ಕುಳಿತಿದೆ. ಸ್ವಲ್ಪ ಸಮಯದ ಹಿಂದೆ ನಮ್ಮ ವಿದೇಶಾಂಗ ಕಾರ್ಯದರ್ಶಿ(ವಿಕ್ರಮ್ ಮಿಶ್ರಿ) ಚೀನಾ ರಾಯಭಾರಿಯೊಂದಿಗೆ ಕೇಕ್ ಕತ್ತರಿಸುತ್ತಿರುವುದನ್ನು ನೋಡಿ ನನಗೆ ಆಘಾತವಾಯಿತು. ಪ್ರಶ್ನೆ ಏನೆಂದರೆ, ಚೀನಾ ವಶಪಡಿಸಿಕೊಂಡಿರುವ 4,000 ಚದರ ಕಿಲೋಮೀಟರ್ ವಿಸ್ತೀರ್ಣದ ಈ ಪ್ರದೇಶಕ್ಕೆ ನಿಖರವಾಗಿ ಏನಾಗುತ್ತಿದೆ? ಎಂದು ಪ್ರಶ್ನಿಸಿದರು.
2020 ರ ಗಾಲ್ವಾನ್ ಕಣಿವೆಯ ಘರ್ಷಣೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಈ ಸಂಘರ್ಘದಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಆದರೆ ಹುತಾತ್ಮರ ನೆನಪಿಗಾಗಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.