ರಾಮಾಯಣದ ಕಥೆಗಳು ಥಾಯ್ ಜನರ ಜೀವನದ ಒಂದು ಭಾಗ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಥೈಲ್ಯಾಂಡ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಥಾಯ್ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ‘ಭಾರತ ಮತ್ತು ಥೈಲ್ಯಾಂಡ್‌ನ ಶತಮಾನಗಳಷ್ಟು ಹಳೆಯ ಸಂಬಂಧಗಳು ನಮ್ಮ ಆಳವಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸಂಬಂಧಗಳ ಮೂಲಕ ಸಂಪರ್ಕ ಹೊಂದಿವೆ. ಬೌದ್ಧ ಧರ್ಮದ ಹರಡುವಿಕೆಯು ನಮ್ಮ ಜನರನ್ನು ಸಂಪರ್ಕಿಸಿದೆ. ಆಯುತಾಯದಿಂದ ನಳಂದದವರೆಗೆ ರಾಮಾಯಣದ ಕಥೆಗಳು ಥಾಯ್ ಜನರ ಜೀವನದ ಒಂದು ಭಾಗವಾಗಿದೆ’ ಎಂದು ಹೇಳಿದರು.

ಸಂಸ್ಕೃತ ಮತ್ತು ಪಾಲಿ ಭಾಷೆಯ ಪ್ರಭಾವ ಇಂದಿಗೂ ಭಾಷೆ ಮತ್ತು ಸಂಪ್ರದಾಯಗಳಲ್ಲಿ ಪ್ರತಿಫಲಿಸುತ್ತದೆ. ನನ್ನ ಭೇಟಿಯ ಸಮಯದಲ್ಲಿ 18ನೇ ಶತಮಾನದ ರಾಮಾಯಣ ಭಿತ್ತಿಚಿತ್ರಗಳನ್ನು ಆಧರಿಸಿದ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದ್ದಕ್ಕಾಗಿ ನಾನು ಥೈಲ್ಯಾಂಡ್ ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ ಎಂದು ಮೋದಿ ಹೇಳಿದರು.

ಥೈಲ್ಯಾಂಡ್​ನ ಬ್ಯಾಂಕಾಕ್‌ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ಮೋದಿ ಅವರನ್ನು ಪ್ರಾರ್ಥನೆಯ ಪಠಣದೊಂದಿಗೆ ಸ್ವಾಗತಿಸಿತು. ಇದು ಎರಡೂ ದೇಶಗಳ ನಡುವೆ ಬೇರೂರಿರುವ ಸಾಂಸ್ಕೃತಿಕ ಬಾಂಧವ್ಯವನ್ನು ತೋರಿಸುತ್ತದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಥಾಯ್ಲೆಂಡ್ ಪ್ರಧಾನಿ ‘ದಿ ವರ್ಲ್ಡ್ ಟಿಪಿಟಕ: ಸಜ್ಜಯ ಫೋನೆಟಿಕ್ ಎಡಿಷನ್’ ಅನ್ನು ಉಡುಗೊರೆಯಾಗಿ ನೀಡಿದರು. ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ರಾಜತಾಂತ್ರಿಕತೆಯ ಮಹತ್ವದ ಕ್ಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಥಾಯ್ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು “ದಿ ವರ್ಲ್ಡ್ ಟಿಪಿಟಕ: ಸಜ್ಜಯ ಫೋನೆಟಿಕ್ ಎಡಿಷನ್” ಪ್ರದಾನ ಮಾಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!