ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಬಹಿಷ್ಕಾರ ಹಾಕಲಾಗಿದೆ. ಇಷ್ಟೇ ಅಲ್ಲದೆ ಅದೇ ವ್ಯಕ್ತಿಗೆ ಆರು ಸಾವಿರ ರೂಪಾಯಿ ದಂಡ ಕೂಡ ಹಾಕಿದ್ದಾರೆ.
ಬೇರೆಯವರ ಕಷ್ಟಕ್ಕೆ ಸ್ಪಂದಿಸಿದ್ದಕ್ಕೆ ಗ್ರಾಮದ ಭೈರಪ್ಪ ಎಂಬುವವರನ್ನು ಊರಿನಿಂದಲೇ ಬಹಿಷ್ಕಾರ ಹಾಕಿದ್ದಾರೆ. ಅದಲ್ಲದೇ ಆ ಮನೆಯವರ ಜೊತೆ ಯಾರೂ ಮಾತನಾಡುವಂತಿಲ್ಲ, ಮನೆಗೆ ಯಾರೂ ಹೋಗುವಂತಿಲ್ಲ, ತೋಟದ ಕೆಲಸಕ್ಕೂ ಹೋಗುವಂತಿಲ್ಲ ಎಂದು ಹೇಳಿದ್ದಾರೆ.
ಮಗನ ಮದುವೆಗೆ ಯಾರೂ ಹೋಗಿಲ್ಲ. ಯಾರಾದರೂ ಇದಕ್ಕೆ ವಿರೋಧವಾಗಿ ನಡೆದುಕೊಂಡರೆ ಅವರಿಗೂ 5,000 ದಂಡ. ಇದೀಗ ಗ್ರಾಮಸ್ಥರಿಂದ ಬಹಿಷ್ಕಾರಕ್ಕೊಳಪಟ್ಟಿರುವ ಭೈರಪ್ಪ ನ್ಯಾಯಕ್ಕಾಗಿ ಡಿಸಿ ಕಚೇರಿ, ಪೋಲಿಸ್ ಸ್ಟೇಷನ್ ಅಲೆಯುತ್ತಿದ್ದಾರೆ.