ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು.
ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು ಎಂದಿದ್ದಾರೆ.