ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ ರೇಸ್‌ನಿಂದ ಹಿಂದೆಯ ಸರಿಯಲು ಅಣ್ಣಾಮಲೈ ನಿರ್ಧರಿಸಿದ್ದಾರೆ.
ಎರಡು ದಿನಗಳ ಹಿಂದೆಯೇ ಕೆ.ಅಣ್ಣಮಲೈ ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ರಾಜಕೀಯ ಮೂಲಗಳು ಹೇಳಿದ್ದವು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರಿಗೆ ಬಿಜೆಪಿ ನಿರ್ಧಾರವನ್ನು ತಿಳಿಸಲಾಗಿತ್ತು. ಅದರಂತೆ ಈಗ ಕೆ.ಅಣ್ಣಮಲೈ ಅವರು ಸ್ಥಾನದಿಂದ ಕೆಳಗಿಳಿದಿದ್ದಾರೆ.
ಕೊಯಮತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ,ಈಗ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ನಾನಲ್ಲ. ಆದರೆ ತಮಿಳುನಾಡಿನಲ್ಲಿ ಜೀವ ಕೊಟ್ಟು ಬಿಜೆಪಿ ಪಕ್ಷವನ್ನು ಬೆಳೆಸಿದ್ದೇನೆ. ಮುಂದಿನ ನೂತನ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಯಾರನ್ನೂ ಸೂಚಿಸಿಲ್ಲ. ಈ ಮಣ್ಣನ್ನ ಬಿಟ್ಟು ನಾನು ಎಲ್ಲಿಗೂ ಹೋಗಲ್ಲ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರ ರೇಸ್ನಲ್ಲಿ ನಾನು ಇಲ್ಲ. ಈ ಪಕ್ಷ ಚೆನ್ನಾಗಿರಬೇಕು. ಏಕೆಂದರೆ ಈ ಪಕ್ಷದಲ್ಲಿ ಎಲ್ಲ ಒಳ್ಳೆಯವರೇ ಇದ್ದಾರೆ. ಈ ಪಕ್ಷಕ್ಕಾಗಿ ಸಾಕಷ್ಟು ಜನ ಉಸಿರು ಕೊಟ್ಟಿದ್ದಾರೆ ಎಂದು ಅಣ್ಣಮಲೈ ಅವರು ಹೇಳಿದ್ದಾರೆ.
ಯಾವುದೇ ರಾಜಕೀಯ ಊಹಾಪೋಹಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.