ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಸವರಾಜ್ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ , ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇದೆ ವೇಳೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಾಲ್ಕು ವಾರಗಳಲ್ಲಿ ಟ್ರಯಲ್ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ ನೀಡಿತು.