ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಹಾಗೂ ಹಲವು ವಿಷಯಗಳಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಭೇಟಿ ವೇಳೆ ಪರಿಷತ್‌ನಲ್ಲಿ ಖಾಲಿ ಇರುವ 4 ಸ್ಥಾನಗಳಿಗೆ ತಮ್ಮ ಆಯ್ಕೆಯ ಕೆಲ ಹೆಸರುಗಳನ್ನು ಸೂಚಿಸಿದ್ದಾರೆ. ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವರಾದ ಈಶ್ವರ್ ಖಂಡ್ರೆ ಹಾಗೂ ಸತೀಶ್ ಜಾರಕಿಹೊಳಿ ಹೆಸರನ್ನು ಸೂಚಿಸಿದ್ದಾರೆ ಎನ್ನಲಾಗಿದೆ.
ಹಾಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರಿಗೆ ಇರುವ ಹೆಚ್ಚುವರಿ ಹೊಣೆಗಾರಿಕೆ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ಬದಲಾಗಬೇಕು ಎಂಬ ಬಗ್ಗೆ ಕಾಂಗ್ರೆಸ್‌ನ ಕೆಲ ಸಚಿವರು ಬಹಿರಂಗ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ರಾಹುಲ್ ಭೇಟಿಯ ವೇಳೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.