ಫೇಕ್‌ ಪನೀರ್‌ ಮಾರಾಟ ಹೆಚ್ಚಾಗ್ತಿದೆ, ಕ್ರಮ ಕೈಗೊಳ್ಳಿ ಎಂದು ನಡ್ಡಾಗೆ ಪತ್ರ ಬರೆದ ಪ್ರಲ್ಹಾದ ಜೋಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೇಶದಲ್ಲಿ ನಕಲಿ ಪನೀರ್‌ ಹಾವಳಿ ಹೆಚ್ಚಾಗುತ್ತಿದ್ದು, ಇದಕ್ಕೆ ಕ್ರಮ ಕೈಗೊಳ್ಳಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ದೇಶಾದ್ಯಂತ ಮಾರುಕಟ್ಟೆಯಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್‌ ಮಾರಾಟವಾಗುತ್ತಿದೆ. ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ವ್ಯಾಪಕ ದೂರುಗಳು ಬರುತ್ತಿವೆ.ಹೀಗಾಗಿ ಇದರ ವಿರುದ್ಧ ತ್ವರಿತ ಕ್ರಮಕೈಗೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಫಾಸ್ಟ್ ಫುಡ್ ಕೇಂದ್ರಗಳು, ರೆಸ್ಟೋರೆಂಟ್‌ಗಳು ಇತರೆಡೆ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮಾಡಲಾಗುತ್ತಿದೆ. ವಿಶೇಷವಾಗಿ ಪನೀರ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥವಾಗಿದ್ದರಿಂದ ಇದನ್ನು ಗಮನಿಸಿರುವ ಅನೇಕ ಸಾರ್ವಜನಿಕರು ಗ್ರಾಹಕ ಸಹಾಯವಾಣಿ ಮೂಲಕ ವ್ಯಾಪಕವಾಗಿ ದೂರು ಸಲ್ಲಿಸಿ ಗಮನ ಸೆಳೆದಿದ್ದಾರೆ.

ಕಲಬೆರಕೆ ಪನೀರ್‌ ಸೇವನೆಯಿಂದ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಗ್ರಾಹಕರು ನೀಡಿದ ದೂರಿನಲ್ಲಿ ತೀವ್ರ ಕಳವಳ ಸಹ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಆಹಾರ ಗುಣಮಟ್ಟ ಮತ್ತು ಸುರಕ್ಷತೆಗಾಗಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ದುಗುಡವನ್ನು ತಮ್ಮ ಗಮನಕ್ಕೆ ತರಬಯಸಿದ್ದೇನೆ ಎಂದು ಸಚಿವ ಜೋಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!