ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಈಗಾಗಲೇ ಎಲ್ಲ ದರಗಳು ಗಗನಕ್ಕೇರಿವೆ. ಈ ಸಂದರ್ಭದಲ್ಲಿ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಡೀಸೆಲ್ ದರ ಏರಿಕೆ ಖಂಡಿಸಿ ಲಾರಿ ಮಾಲೀಕರ ಸಂಘ ಸರ್ಕಾರದ ವಿರುದ್ಧ ಏಪ್ರಿಲ್ 14ರ ಮಧ್ಯರಾತ್ರಿಯಿಂದ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಈ ವೇಳೆ ರಾಜ್ಯ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡನೇ ಬಾರಿ ಡೀಸೆಲ್ ದರ ಹೆಚ್ಚಳ ಮಾಡಿದೆ. ಇದರಿಂದ ಲಾರಿ ಮಾಲೀಕರು ವಿಷ ಕುಡಿಯುವ ಪರಿಸ್ಥಿತಿ ಬಂದಿದೆ. ನಮ್ಮ ಮುಷ್ಕರದಲ್ಲಿ ಪೆಟ್ರೋಲ್, ಡೀಸೆಲ್ ಬಂಕ್ಗಳು ಬಂಧ್ ಆಗಲಿದೆ. ಹೀಗಾಗಿ ಏಪ್ರಿಲ್ 14 ರಂದು ರಾಜ್ಯಾದ್ಯಂತ ಮುಷ್ಕರ ಮಾಡುತ್ತೇವೆ ಎಂದು ಹೇಳಿದ್ದಾರೆ.