ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ. ಇದನ್ನು ನಾವು ನ್ಯಾಯಾಲಯಗಳಲ್ಲಿ ಪ್ರಶ್ನೆ ಮಾಡಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ವಕ್ಫ್ ತಿದ್ದುಪಡಿ ವಿಚಾರದಲ್ಲಿ ಯಾರನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂಬ ಧೋರಣೆಯನ್ನು ಪ್ರದರ್ಶಿಸುವ ಮೂಲಕ ಕೇಂದ್ರ ಸರ್ಕಾರವು ದಬ್ಬಾಳಿಕೆ ನಡೆಸುತ್ತಿದೆ ಎಂದು ದೂರಿದರು.
ಕೇಂದ್ರ ಸರ್ಕಾರದ ನಡೆ ದ್ವೇಷದಿಂದ ಕೂಡಿದೆ. ಇಂತಹ ಸೂಕ್ಷ್ಮ ವಿಷಯದಲ್ಲಿ ದ್ವೇಷ ಸಾಧಿಸುವಂಥದ್ದು ಸರಿಯಲ್ಲ. ಕೇಂದ್ರವು ಸಂಯಮದಿಂದ ನಡೆದುಕೊಳ್ಳಬೇಕಿತ್ತು. ಹಿಂದೂ ಧರ್ಮದ ಟ್ರಸ್ಟ್‌ಗಳು, ವಕ್ಫ್ ಮಂಡಳಿ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿದೆ. ಭೂಮಿ ಮೇಲೆ ಹಕ್ಕು ಇರುವುದು ರಾಜ್ಯಕ್ಕೆ. ರಾಜ್ಯದ ಹಕ್ಕನ್ನು ಕಿತ್ತುಕೊಳ್ಳುವ ಯತ್ನವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದರು.