ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಶ್ಚಿಯನ್ನರ ಆಸ್ತಿ ಮೇಲೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ (ಆರ್‌ಎಸ್‌ಎಸ್) ಕಣ್ಣಿಟ್ಟಿದೆ ಎಂಬ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸಚಿವ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಶಿ, ಕೇರಳದ ವಯನಾಡಿನಲ್ಲಿ ರಾಹುಲ್ ಮತ್ತು ಪ್ರಿಯಾಂಕ ವಿರುದ್ಧ ಜನ ಹೋರಾಟ ಮಾಡ್ತಿದ್ದಾರೆ. ಹೀಗಾಗಿ, ಅದನ್ನು ಡೈವರ್ಟ್ ಮಾಡೋಕೆ ಈ ರೀತಿ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿಗೆ ಗಂಭೀರತೆಯೇ ಇಲ್ಲ. ಅವರೊಬ್ಬ ಅಪ್ರಬುದ್ಧ ರಾಜಕಾರಣಿ ಎಂದು ವ್ಯಂಗ್ಯವಾಡಿದ್ದಾರೆ.
ಓಟ್ ಬ್ಯಾಂಕ್ ಜಾಸ್ತಿ ಇದೆ ಎಂದು ಕ್ರಿಶ್ಚಿಯನ್ನರನ್ನು ಬಿಟ್ಟು ಮುಸ್ಲಿಮರ ಬೆನ್ನುಹತ್ತಿದ್ದಾರೆ. ಕಾಂಗ್ರೆಸ್ ನಾಯಕರು ಬರೀ ಓಟ್ ಬ್ಯಾಂಕ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ದೇಶದಲ್ಲಿ ವಕ್ಫ್ ಆಸ್ತಿ 18 ಲಕ್ಷದಿಂದ 39 ಲಕ್ಷ ಎಕರೆಗೆ ಏರಿಕೆಯಾಗಿದೆ. ಅದಕ್ಕೆ ಸರಿಯಾದ ರೀತಿಯಲ್ಲಿ ಆದಾಯ ಬಂದರೆ ಮುಸ್ಲಿಮರಿಗೂ ಖುಷಿಯಾಗುತ್ತದೆ ಎಂದು ಹೇಳಿದರು.