ಮಣಿಪುರದಲ್ಲಿ ಬಾಲಕ ಸೇರಿ ನಾಲ್ವರು ಉಗ್ರರ ಬಂಧನ: ಶಸ್ತ್ರಾಸ್ತ್ರ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದ ಬಿಷ್ಣುಪುರ ಮತ್ತು ಕಾಕ್‌ಚಿಂಗ್ ಜಿಲ್ಲೆಗಳಲ್ಲಿ ಓರ್ವ ಬಾಲಕ ಸೇರಿದಂತೆ ನಾಲ್ವರು ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ.

ಬಾಲಕ ಹಾಗೂ ಇನ್ನಿಬ್ಬರು ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ (ಪಿಡಬ್ಲುಜಿ) ಸದಸ್ಯರಾಗಿದ್ದರು. ಅಲ್ಲದೆ ಕಾಕ್‌ಚಿಂಗ್‌ನಲ್ಲಿ ನಿಷೇಧಿತ ‘ಯುನೈಟೆಡ್‌ ಪೀಪಲ್ಸ್‌ ಪಾರ್ಟಿ ಆಫ್‌ ಕಾಂಗ್ಲೀಪಾಕ್’ನ ಒಬ್ಬ ಸದಸ್ಯನನ್ನು ಬಂಧಿಸಲಾಗಿದೆ.

ಶೋಧ ಕಾರ್ಯಾಚರಣೆಯ ವೇಳೆ ಜಿರೀಬಾಮ್‌ ಜಿಲ್ಲೆಯಲ್ಲಿ ಪೊಲೀಸರು ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!