ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ನೀರಾವಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಏನೇ ಸಮಸ್ಯೆ ಇದ್ದರು ಬಗೆಹರಿಸಿಕೊಡುವುದಾಗಿ ಕೇಂದ್ರ ಜಲಶಕ್ತಿ ಸಚಿವರು ಭರವಸೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಿಸಲಾಗಿದ್ದ 5,300 ಕೋಟಿ ರೂ. ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಲಾಗಿದೆ. ಜೊತೆಗೆ ಯೋಜನೆಗೆ ರಾಜ್ಯದಿಂದ ಎಷ್ಟು ಖರ್ಚಾಗಿದೆ, ಕೇಂದ್ರ ಎಷ್ಟು ಅನುದಾನ ನೀಡಬೇಕು ಎಂಬ ವಿವರ ನೀಡಲಾಗಿದೆ. ಕೇಂದ್ರ ಜಲಶಕ್ತಿ ಸಚಿವರು ಅನುದಾನ ನೀಡುವ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ರಾಜ್ಯದ ಸಮಸ್ಯೆಗಳು ಸಚಿವರಿಗೆ ಅರ್ಥವಾಗಿದೆ. ಹೀಗಾಗಿ ಆ ವಿಚಾರದ ಕುರಿತು ಅವಶ್ಯವಿರುವ ಇತರ ರಾಜ್ಯಗಳೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.