ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ 9 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ವೈಟ್ಫೀಲ್ಡ್ ನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಇಸಿನಾಕಾ ಭಟ್ (9) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಚಾಲಕ ಹಾಗೂ ಆರು ವರ್ಷದ ಬಾಲಕಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಲಕ ತನ್ನ ಆರು ಮತ್ತು ಒಂಬತ್ತು ವರ್ಷದ ಮಕ್ಕಳನ್ನು ಟ್ರ್ಯಾಕ್ಟರ್ನಲ್ಲಿ ಕೂರಿಸಿಕೊಂಡು ಶೆಡ್ಗೆ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಉರುಳಿದ ಟ್ರ್ಯಾಕ್ಟರ್ ಕೆರೆಗೆ ಬಿದ್ದಿದೆ. ಆಗ ಟ್ರ್ಯಾಕ್ಟರ್ ಕೆಳಗೆ ಸಿಲುಕಿಕೊಂಡ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಪೊಲೀಸರು ಟ್ರ್ಯಾಕ್ಟರ್ ಅನ್ನು ವಶಪಡಿಸಿಕೊಂಡಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.