ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ, ನಿರ್ದೇಶಕ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ- ಚಾಪ್ಟರ್-1’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಅಕ್ಟೋಬರ್ 2ಕ್ಕೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಇದೆಲ್ಲದರ ನಡುವೆ ರಿಷಬ್ ಶೆಟ್ಟಿ ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ.
ಮಂಗಳೂರಿನ ಬಾರೆಬೈಲ್ ವಾರಾಹಿ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಭಾಗಿ ಆಗಿ ದೈವದಲ್ಲಿ ರಿಷಬ್ ಶೆಟ್ಟಿ ತಮ್ಮ ಕಷ್ಟ ಹೇಳಿಕೊಂಡು ನೋವನ್ನು ತಿಳಿಸಿದ್ದಾರೆ. ಕೂಡಲೇ ದೈವ ಸಂತೈಸಿ ಧೈರ್ಯ ತುಂಬಿದೆ. ಜಗತ್ತಿನೆಲ್ಲೆಡೆ ನಿನಗೆ ಶತ್ರುಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕೆಲಸ ಫಲ ನೀಡದಂತೆ ಹಾಳು ಮಾಡಲು ಭಾರೀ ಸಂಚು ನಡೆದಿದೆ. ಈಗ ಗಂಡಾಂತರ ಬಂದಿದೆಯೆಂದು ನೀನು ಬಂದಿದ್ದೀಯಾ, ನೀನು ನಂಬಿದ ದೈವ ಕೈಬಿಡಲ್ಲ ಎಂದು ದೈವ ಅಭಯ ನೀಡಿದೆ.
ನಿನಗೆ ಯಾರು ಕೇಡು ಬಗೆದಿದ್ದಾರೆಂದು ಈಗ ನಾನು ಹೇಳಲ್ಲ, ಆದರೆ ಕೇಡು ತಾಗದಂತೆ ನಾನು ನೋಡಿಕೊಳ್ತೇನೆ. ನನಗೆ ಸೇವೆ ನೀಡುವ ಹರಕೆ ಕಟ್ಟಿಕೋ, 5 ತಿಂಗಳಲ್ಲಿ ನಿನಗೆ ಒಳ್ಳೆದು ಮಾಡುತ್ತೇನೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ವಾರಾಹಿ ಪಂಜುರ್ಲಿ ದೈವ ಮಾತು ನೀಡಿದೆ.