ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಚಿತ್ರರಂಗದ ಜನಪ್ರಿಯ ನಟ ಅಜಿತ್ ಕುಮಾರ್ ಮುಖ್ಯಭೂಮಿಕೆಯ ‘ಗುಡ್ ಬ್ಯಾಡ್ ಅಗ್ಲಿ’ ಬಿಡುಗಡೆ ಹೊಸ್ತಿಲಲ್ಲಿದೆ. ಬಹುನಿರೀಕ್ಷಿತ ಚಿತ್ರ ಇದೇ ಏಪ್ರಿಲ್ 10ರಂದು ಚಿತ್ರಮಂದಿರಗಳಲ್ಲಿ ಬಹಳ ಅದ್ಧೂರಿಯಾಗಿ ಬಿಡುಗಡೆ ಆಗಲಿದೆ. ಇದು ತಮಿಳು ಚಲನಚಿತ್ರೋದ್ಯಮದಲ್ಲಿ 2025ರಲ್ಲಿ ಬಿಡುಗಡೆಯಾಗುತ್ತಿರುವ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ.
ಅದಿಕ್ ರವಿಚಂದ್ರನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಸಿನಿಮಾದ ಪ್ರಚಾರವೂ ಭರದಿಂದ ಸಾಗಿದೆ. ಆದ್ರೆ, ನಾಯಕ ನಟನ ಬೃಹತ್ ಕಟೌಟ್ ಧರೆಗುರುಳಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದೆ. ಹೌದು, ಥಿಯೇಟರ್ ಒಂದರ ಬಳಿ ಸುಮಾರು 250 ಅಡಿ ಎತ್ತರದ ಕಟೌಟ್ ಅನ್ನು ನಿರ್ಮಿಸಲಾಗುತ್ತಿತ್ತು. ಆದ್ರೆ ಅದು ಇದ್ದಕ್ಕಿದ್ದಂತೆ ಕೆಳಗೆ ಬಿದ್ದು ಅವಾಂತರ ಸೃಷ್ಟಿಸಿದೆ.
Take care Guys..#GoodBadUgly #AjithKumar pic.twitter.com/8iP9y46AEi
— Fukkard (@Fukkard) April 6, 2025