ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾನೂನು ಸುವ್ಯವಸ್ಥೆ ಹಾಗೂ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಆಯೋಜಿಸಿರುವ 16 ದಿನಗಳ ಜನಾಕ್ರೋಶ ಯಾತ್ರೆ ಇಂದು ಆರಂಭಗೊಂಡಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಸರಣಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಜಯೇಂದ್ರ ತಮ್ಮ ಕುರ್ಚಿ(ಅಧ್ಯಕ್ಷ ಸ್ಥಾನ) ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಗೆ ಅಲ್ಲ ಎಂದು ಎಂದು ತಿರುಗೇಟು ನೀಡಿದ್ದಾರೆ.
ಪಕ್ಷದೊಳಗಿದ್ದು ಮಾಡುವ ಆರೋಪಗಳಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಯತ್ನಾಳ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದೆ. ಅಂತಿಮವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ. ಇದಕ್ಕಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ ಎಂದರು.