ಚಿಕ್ಕಬಳ್ಳಾಪುರ ಜಿಲ್ಲೆಗೆ ಗೃಹ ಸಚಿವರ ಭೇಟಿ: ಅಪಘಾತ ವಲಯಗಳ ನಿಯಂತ್ರಣಕ್ಕೆ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ 19 ಅಪಘಾತ ವಲಯಗಳಿದ್ದು,ಇಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಅಪಘಾತದಿಂದ 700 ಜನರ ಸಾವು ಕಂಡಿದ್ದಾರೆ. 1400 ಗಾಯಗೊಂಡಿರುವ ಪ್ರಕರಣ ದಾಖಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜೊತೆಗೆ ಪೋಕ್ಸೋ ಕೇಸ್ ಮತ್ತು ಅದಕ್ಕೆ ಸಂಬಂಧಿಸಿದ ಪ್ರಕರಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ. ಅನೇಕ ಕಾರಣಗಳಿಂದ ಕಡಿಮೆ ಆಗ್ತಿದೆ. ಶಿಕ್ಷೆ ಆಗೋ ರೀತಿಯಲ್ಲಿ ಪೂರಕ ದಾಖಲೆಗಳೊಂದಿಗೆ ಕ್ರಮವಾಗಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!