ಹೊಸದಿಗಂತ ಡಿಜಿಟಲ್ ಡೆಸ್ಕ್:
2025 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 12:30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಸ ಪ್ರಕಟಿಸಲಿದ್ದಾರೆ. ಸುದ್ಧಿಗೋಷ್ಠಿಯ ಬಳಿಕ ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ವ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್ 8ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ.
ಪಿಯು ಫಲಿತಾಂಶ ಲಭ್ಯವಾಗುವ ವೆಬ್‌ಸೈಟ್ :www.karresults.nic.in