ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್ನ 17 ಆರೋಪಿಗಳು ಇಂದು (ಏಪ್ರಿಲ್ 8) ಕೋರ್ಟ್ಗೆ ಹಾಜರಾಗಬೇಕಿತ್ತು. ಈಗಾಗಲೇ ಪವಿತ್ರಾ ಗೌಡ ಸೇರಿದಂತೆ ಕೆಲವು ಆರೋಪಿಗಳು ಬೆಂಗಳೂರಿನ ಸಿಸಿಹೆಚ್ 57ನೇ ಕೋರ್ಟ್ಗೆ ಹಾಜರಾಗಿದ್ದಾರೆ.
ಆದರೆ, ನಟ ದರ್ಶನ್ ಅವರು ಕೋರ್ಟ್ಗೆ ಇಂದು ಗೈರಾಗಿದ್ದಾರೆ. ಬೆನ್ನು ನೋವಿನ ಕಾರಣ ನೀಡಿ ಅವರು ವಿನಾಯಿತಿ ಕೇಳಿದ್ದಾರೆ. ಅವರ ಪರ ವಕೀಲರು ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಈ ವೇಳೆ ಕೋರ್ಟ್ ಜಡ್ಜ್ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಬೇಕಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಇತರರಾದ ವಿನಯ್, ನಾಗರಾಜ್, ನಂದಿಶ್, ಜಗದೀಶ್, ಪವನ್, ಲಕ್ಷ್ಮಣ, ದೀಪಕ್, ಪ್ರದೋಶ್, ಕಾರ್ತಿಕ್, ಕೇಶವ ಮೂರ್ತಿ ಸೇರಿ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ದರ್ಶನ್ ಮಾತ್ರ ಗೈರಾಗಿದ್ದಾರೆ. ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ದರ್ಶನ್ಗೆ ಹೈಕೋರ್ಟ್ ಅನುಮತಿ ನೀಡಿತ್ತು. ಈ ಆದೇಶ ಪ್ರತಿಯನ್ನು ದರ್ಶನ್ ಪರ ವಕೀಲರು ಸಿಸಿಹೆಚ್ 57ನೇ ಕೋರ್ಟ್ಗೆ ಸಲ್ಲಿಕೆ ಮಾಡಿದರು. ಇದನ್ನು ಜಡ್ಜ್ ಪರಿಶೀಲನೆ ಮಾಡಿದ್ದಾರೆ..