ರ‍್ಯಾಂಕ್ ನಿರೀಕ್ಷೆ ಇತ್ತು, ಓದೋದು ಅಂದ್ರೆ ನಂಗಿಷ್ಟ ಎಂದ ಪಿಯುಸಿ ಸೈನ್ಸ್‌ ಟಾಪರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ 600ಕ್ಕೆ 599 ಅಂಕ ಪಡೆಯುವ ಮೂಲಕ ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ.

ರ‍್ಯಾಂಕ್ ಬರುವ ನಿರೀಕ್ಷೆ ಇತ್ತು. ಕಾಲೇಜಿನಲ್ಲಿ ಉಪನ್ಯಾಸಕರೂ ನಿನ್ನಿಂದ ಸಾಧ್ಯ ಎಂದು ಹೇಳುತ್ತಿದ್ದರು. ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಪಿಸಿಎಂಸಿ ಅಧ್ಯಯನ ಮಾಡಿರುವುದರಿಂದ ಮುಂದೆ ಇಂಜಿನಿಯರ್ ಆಗಬೇಕೆಂಬುದು ನನ್ನ ಬಯಕೆ.

ಭರತನಾಟ್ಯದಲ್ಲಿ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ತರಬೇತು ಪಡೆದಿದ್ದು, ಪುಸ್ತಕ ಓದುವುದೆಂದರೆ ತುಂಬಾ ಇಷ್ಟ ಎನ್ನುತ್ತಾರೆ ಅಮೂಲ್ಯ. ಹಾಗೇ ಟಾಪರ್​ ಬಂದಿರುವುದರ ಹಿಂದಿನ ತಯಾರಿ ಹೇಗಿತ್ತು? ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!